ಅರಣ್ಯಕಾಂಡ

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36


ಅಧ್ಯಾಯ 8

ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
2 ಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಆ ಏಳು ದೀಪಗಳು ಪ್ರಕಾಶಿಸಬೇಕು.
3 ಆರೋನನು ಹಾಗೆಯೇ ಮಾಡಿ ದೀಪಸ್ತಂಭಕ್ಕೆ ಎದುರಾಗಿ ಅದರ ದೀಪಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.
4 ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು.
5 ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
6 ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ತೆಗೆದುಕೊಂಡು ಅವರನ್ನು ಶುದ್ಧ ಮಾಡು.
7 ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.
8 ಅವರು ಒಂದು ಎಳೇ ಹೋರಿಯನ್ನು ಅದರೊಂದಿಗೆ ಆಹಾರ ಸಮರ್ಪಣೆಯನ್ನು ಅಂದರೆ ಎಣ್ಣೇ ಬೆರೆಸಿದ ನಯ ವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ಪಾಪದ ಬಲಿ ಗಾಗಿ ಮತ್ತೊಂದು ಎಳೇ ಹೋರಿಯನ್ನೂ ನೀನು ತೆಗೆದುಕೋ.
9 ಆಗ ನೀನು ಲೇವಿಯರನ್ನು ಸಭೆಯ ಗುಡಾರದ ಮುಂದೆ ಕರತಂದು ಇಸ್ರಾಯೇಲ್ಯರ ಸಮಸ್ತ ಸಭೆಯನ್ನು ಒಟ್ಟುಗೂಡಿಸಬೇಕು.
10 ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
11 ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್‌ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು.
12 ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು.
13 ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು.
14 ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು.
15 ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು.
16 ಅವರು ಇಸ್ರಾಯೇಲ್‌ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್‌ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.
17 ಇಸ್ರಾಯೇಲ್‌ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.
18 ಇಸ್ರಾಯೇಲ್‌ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು.
19 ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್‌ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್‌ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್‌ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್‌ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.
20 ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್‌ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.
21 ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
22 ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು.
23 ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
24 ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು.
25 ಆದರೆ ಐವತ್ತು ವರುಷದವ ರಾಗಿ ಸೇವೆಯನ್ನು ಬಿಟ್ಟುಬಿಟ್ಟವರು ಇನ್ನು ಮೇಲೆ ಸೇವೆಮಾಡಬಾರದು.
26 ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.