ಎಸ್ತೇರಳು

1 2 3 4 5 6 7 8 9 10


ಅಧ್ಯಾಯ 7

ಅರಸನೂ ಹಾಮಾನನೂ ರಾಣಿಯಾದ ಎಸ್ತೇರಳ ಔತಣಕ್ಕೆ ಬಂದರು.
2 ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.
3 ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ.
4 ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
5 ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು.
6 ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
7 ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು.
8 ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.
9 ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.
10 ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.