0:00
0:00

ಅಧ್ಯಾಯ 118

ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ.
2 ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್‌ ಹೇಳಲಿ.
3 ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ.
4 ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ.
5 ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು.
6 ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು?
7 ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು.
8 ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
9 ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
10 ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು.
11 ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು.
12 ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು.
13 ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು.
14 ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು.
15 ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
16 ಕರ್ತನ ಬಲಗೈ ಉನ್ನತವಾಗಿದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
17 ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.
18 ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ.
19 ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು.
20 ಇದೇ ಕರ್ತನ ಬಾಗಲು, ನೀತಿವಂತರು ಅದರಲ್ಲಿ ಪ್ರವೇಶಿಸುವರು.
21 ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ.
22 ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
23 ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ.
24 ಕರ್ತನು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡುವೆವು.
25 ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ.
26 ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.
27 ದೇವರು ಕರ್ತನಾಗಿದ್ದಾನೆ. ಆತನು ನಮಗೆ ಬೆಳಕನ್ನು ತೋರಿಸಿದ್ದಾನೆ. ಬಲಿ (ಪಶುವನ್ನು) ಹಗ್ಗಗಳಿಂದ ಕಟ್ಟಿ ಬಲಿಪೀಠದ ಕೊಂಬುಗಳಿಗೆ ಕಟ್ಟಿರಿ,
28 ನೀನು ನನ್ನ ದೇವರಾಗಿದ್ದೀ; ನಿನ್ನನ್ನು ಕೊಂಡಾಡುವೆನು; ನನ್ನ ದೇವರೇ, ನಿನ್ನನ್ನು ಘನಪಡಿಸುವೆನು.
29 ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು. ಆತನ ಕರು ಣೆಯು ಯುಗಯುಗಕ್ಕೂ ಅದೆ.