0:00
0:00

ಅಧ್ಯಾಯ 82

ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
2 ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
3 ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
4 ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.
5 ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
6 ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.
7 ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.
8 ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.