ಅಧ್ಯಾಯ 20

ತರ್ತಾನನು ಅಶ್ಶೂರಿನ ಅರಸನಾದ ಸರ್ಗೋನನು ಅವನನ್ನು ಕಳುಹಿಸಿದ್ದದ ರಿಂದ ಅಷ್ಡೋದಿಗೆ ಬಂದ ವರ್ಷದಲ್ಲಿ ಅವನು ಅಷ್ಡೋದಿಗೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದಾಗ,
2 ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು.
3 ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.
4 ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
5 ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.
6 ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.