ಯೆಶಾಯ
ಅಧ್ಯಾಯ 56
ಕರ್ತನು ಹೀಗನ್ನುತ್ತಾನೆ--ನ್ಯಾಯವನ್ನು ಕೈಕೊಳ್ಳಿರಿ, ನೀತಿಯಲ್ಲಿ ನಡೆಯಿರಿ; ಯಾಕಂದರೆ ನನ್ನ ರಕ್ಷಣೆಯು ಬರುವದಕ್ಕೂ ನನ್ನ ನೀತಿಯು ಪ್ರಕಟವಾಗುವದಕ್ಕೂ ಸವಿಾಪವಾಗಿದೆ.
2 ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.
3 ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ.
4 ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--
5 ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.
6 ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ
7 ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
8 ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
9 ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
10 ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
11 ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.
12 ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.