1 ಕೊರಿಂಥದವರಿಗೆ ं

1 2 3 4 5 6 7 8 9 10 11 12 13 14 15 16


ಅಧ್ಯಾಯ 8

ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
2 ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
3 ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
4 ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
5 ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)
6 ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
7 ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.
8 ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ.
9 ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ.
10 ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ?
11 ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ?
12 ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.
13 ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.