ನಂಬಿಕೆ


 • ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
  ರೋಮಾಪುರದವರಿಗೆ 10:17
 • ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
  ಙ್ಞಾನೋಕ್ತಿಗಳು 3:5, 6
 • ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
  ಮಾರ್ಕನು 9:23
 • ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
  2 ಕೊರಿಂಥದವರಿಗೆ 5:17
 • ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
  ಲೂಕನು 1:37
 • ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
  ಮತ್ತಾಯನು 9:29
 • ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
  ಇಬ್ರಿಯರಿಗೆ 11:1
 • ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ. ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು. ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ. ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
  ಯಾಕೋಬನು 1:5-8
 • ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
  ಇಬ್ರಿಯರಿಗೆ 11:6
 • ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
  ಯಾಕೋಬನು 2:26
 • ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
  ರೋಮಾಪುರದವರಿಗೆ 14:23
 • ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.
  ಇಬ್ರಿಯರಿಗೆ 10:38
 • ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು
  ಯೋಬನು 13:15
 • ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
  ಯೆಶಾಯ 30:15
 • ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
  2 ತಿಮೊಥೆಯನಿಗೆ 2:13
 • ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
  1 ಯೋಹಾನನು 5:4
 • ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.
  ಎಫೆಸದವರಿಗೆ 6:16
 • ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
  ಮತ್ತಾಯನು 17:20
 • ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
  ಇಬ್ರಿಯರಿಗೆ 12:2
 • ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
  ರೋಮಾಪುರದವರಿಗೆ 5:1
 • ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ.
  ಮಾರ್ಕನು 11:22
 • ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು. ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.
  1 ಪೇತ್ರನು 1:6-9