ಉಳಿದ


  • ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
    ವಿಮೋಚನಕಾಂಡ 33:14
  • ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)
    1 ಸಮುವೇಲನು 9:27
  • ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.
    2 ಪೂರ್ವಕಾಲವೃತ್ತಾ 14:7
  • ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
    ಕೀರ್ತನೆಗಳು 4:4
  • ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
    ಕೀರ್ತನೆಗಳು 27:14
  • ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
    ಕೀರ್ತನೆಗಳು 37:7
  • ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
    ಕೀರ್ತನೆಗಳು 40:1
  • ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.
    ಕೀರ್ತನೆಗಳು 46:10
  • ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.
    ಕೀರ್ತನೆಗಳು 55:22
  • ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
    ಕೀರ್ತನೆಗಳು 62:8
  • ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
    ಯೆಶಾಯ 26:3
  • ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
    ಯೆಶಾಯ 30:15
  • ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
    ಯೆಶಾಯ 32:17
  • ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
    ಯೆಶಾಯ 40:31
  • ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು.
    ಯೆರೆಮಿಯ 17:7
  • ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
    ಯೆರೆಮಿಯ 29:11
  • ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
    ಪ್ರಲಾಪಗಳು 3:25, 26
  • ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು. ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ. 30 ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
    ಮತ್ತಾಯನು 11:28-30
  • ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
    ಫಿಲಿಪ್ಪಿಯವರಿಗೆ 4:7
  • ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
    2 ತಿಮೊಥೆಯನಿಗೆ 1:12
  • ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.
    1 ಪೇತ್ರನು 5:7