ಭಯ


 • ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
  ಕೀರ್ತನೆಗಳು 27:1, 5
 • ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
  ಕೀರ್ತನೆಗಳು 34:4
 • ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
  ಙ್ಞಾನೋಕ್ತಿಗಳು 1:33
 • ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
  ಯೆಶಾಯ 35:4
 • ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
  ಯೆಶಾಯ 41:10
 • ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
  ರೋಮಾಪುರದವರಿಗೆ 8:15
 • ಆದರೆ ಅವನು ರೋಮ್‌ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.
  2 ತಿಮೊಥೆಯನಿಗೆ 1:7
 • ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
  ಕೀರ್ತನೆಗಳು 46:1-3
 • ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು. ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
  ಕೀರ್ತನೆಗಳು 56:3, 4
 • ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ.
  ಕೀರ್ತನೆಗಳು 91:5, 6
 • ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
  ಙ್ಞಾನೋಕ್ತಿಗಳು 3:24
 • ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು. .
  ಯೆರೆಮಿಯ 1:8
 • ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.
  1 ಯೋಹಾನನು 4:18
 • ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ. ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
  ಇಬ್ರಿಯರಿಗೆ 13:5, 6
 • ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
  ಯೋಹಾನನು 14:27
 • ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
  ಇಬ್ರಿಯರಿಗೆ 2:14, 15