ಪ್ರಾಮಾಣಿಕತೆ
- ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
ಕೊಲೊಸ್ಸೆಯವರಿಗೆ 3:9 -
ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
ರೋಮಾಪುರದವರಿಗೆ 12:17 -
ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
2 ಕೊರಿಂಥದವರಿಗೆ 8:21 -
ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು. ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು.
ಙ್ಞಾನೋಕ್ತಿಗಳು 11:1, 3 -
ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು. ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ.
ಙ್ಞಾನೋಕ್ತಿಗಳು 12:13, 17 -
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ಙ್ಞಾನೋಕ್ತಿಗಳು 28:13 -
ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
ಯಾಕೋಬನು 5:16 -
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
2 ಕೊರಿಂಥದವರಿಗೆ 4:2