ಶಿಸ್ತು


  • ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
    ಙ್ಞಾನೋಕ್ತಿಗಳು 3:12
  • ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ.
    ಙ್ಞಾನೋಕ್ತಿಗಳು 13:24
  • ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.
    ಙ್ಞಾನೋಕ್ತಿಗಳು 19:18
  • ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
    ಙ್ಞಾನೋಕ್ತಿಗಳು 22:15
  • ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ.
    ಙ್ಞಾನೋಕ್ತಿಗಳು 23:13
  • ತಂದೆಗಳೇ, ನಿಮ್ಮ ಮಕ್ಕಳು ಮನಗುಂದದಂತೆ ಅವರನ್ನು ಕೆಣಕಿ ಕೋಪವನ್ನೆಬ್ಬಿಸ ಬೇಡಿರಿ.
    ಕೊಲೊಸ್ಸೆಯವರಿಗೆ 3:21
  • ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.
    1 ತಿಮೊಥೆಯನಿಗೆ 3:4
  • ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ; ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು. ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ? ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
    ಇಬ್ರಿಯರಿಗೆ 12:5-9
  • ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
    ಕೀರ್ತನೆಗಳು 34:11
  • ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
    ಕೀರ್ತನೆಗಳು 119:9
  • ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
    ಕೀರ್ತನೆಗಳು 138:8
  • ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.
    ಕೀರ್ತನೆಗಳು 144:12
  • ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
    ಙ್ಞಾನೋಕ್ತಿಗಳು 3:1
  • ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು. 33 ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ.
    ಙ್ಞಾನೋಕ್ತಿಗಳು 8:32-33
  • ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
    ಙ್ಞಾನೋಕ್ತಿಗಳು 22:6
  • ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
    ಯೆಶಾಯ 54:13
  • ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
    ಯೋಹಾನನು 21:15
  • ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
    2 ತಿಮೊಥೆಯನಿಗೆ 2:22
  • ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
    3ಯೋಹಾನನು 1:4
  • ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
    ಧರ್ಮೋಪದೇಶಕಾಂಡ 6:7
  • ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.
    ಧರ್ಮೋಪದೇಶಕಾಂಡ 12:28
  • ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು. 47 ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
    ಧರ್ಮೋಪದೇಶಕಾಂಡ 32:46, 47
  • ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು. 5 ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ.
    ಙ್ಞಾನೋಕ್ತಿಗಳು 4:4, 5
  • ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.
    ಙ್ಞಾನೋಕ್ತಿಗಳು 20:7
  • ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.
    ನೆಹೆಮಿಯ Nehemiah 4:14
  • ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.
    ಎಫೆಸದವರಿಗೆ 6:4
  • ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
    2 ತಿಮೊಥೆಯನಿಗೆ 2:2