ಗರ್ಭಪಾತ


 • ಕೊಲ್ಲಬೇಡ
  ಧರ್ಮೋಪದೇಶಕಾಂಡ 5:17
 • ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
  ಕೀರ್ತನೆಗಳು 139:16
 • Sಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
  ಆದಿಕಾಂಡ Genesis 1:27
 • ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
  ಕೀರ್ತನೆಗಳು 127:3
 • ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ. ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ; ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.
  ಕೀರ್ತನೆಗಳು 139:13-15
 • ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?
  ಯೋಬನು 31:15
 • ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
  ಯೆರೆಮಿಯ 1:5