ಮೆಚ್ಚುಗೆ ಫಲಿತಾಂಶಗಳು
- ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.
2 ಪೂರ್ವಕಾಲವೃತ್ತಾ 20:22 -
ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ನೆಹೆಮಿಯ Nehemiah 8:10 -
ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ಕೀರ್ತನೆಗಳು 50:23 -
ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
ಕೀರ್ತನೆಗಳು 89:15 -
ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
ಯೆರೆಮಿಯ 30:19 -
ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ಅಪೊಸ್ತಲರ ಕೃತ್ಯಗ 2:47 -
ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
ಫಿಲಿಪ್ಪಿಯವರಿಗೆ 4:6 -
ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು. ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
ಮತ್ತಾಯನು 5:10-12 -
ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು. ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
ಲೂಕನು 6:22, 23 -
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಯೋಹಾನನು 16:33 -
ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.
ಅಪೊಸ್ತಲರ ಕೃತ್ಯಗ 5:41 -
ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
ರೋಮಾಪುರದವರಿಗೆ 9:20 -
ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
2 ಕೊರಿಂಥದವರಿಗೆ 6:10 -
ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.
ಫಿಲಿಪ್ಪಿಯವರಿಗೆ 4:11 -
ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
1 ಥೆಸಲೊನೀಕದವರಿಗೆ 5:18 -
ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
ಇಬ್ರಿಯರಿಗೆ 10:34 -
ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
1 ಪೇತ್ರನು 1:8 -
ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
1 ಪೇತ್ರನು 3:14 -
ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ. ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
1 ಪೇತ್ರನು 4:13, 16 -
ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
ಕೀರ್ತನೆಗಳು 32:11 -
ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.
ಕೀರ್ತನೆಗಳು 33:1 -
ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು.
ಕೀರ್ತನೆಗಳು 34:1 -
ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.
ಕೀರ್ತನೆಗಳು 35:28 -
ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
ಕೀರ್ತನೆಗಳು 68:19 -
ನನ್ನ ಬಾಯಿ ನಿನ್ನ ಸ್ತೋತ್ರದಿಂದಲೂ ದಿನವೆಲ್ಲಾ ನಿನ್ನ ಗೌರವದಿಂದಲೂ ತುಂಬಿರಲಿ.
ಕೀರ್ತನೆಗಳು 71:8 -
ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ 2 ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ
ಕೀರ್ತನೆಗಳು 92:1, 2 -
ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.
ಕೀರ್ತನೆಗಳು 100:4 -
ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. 2 ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
ಕೀರ್ತನೆಗಳು 103:1, 2 -
ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
ಕೀರ್ತನೆಗಳು 107:8 -
ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ. 23 ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗಿ ಬಹಳ ನೀರುಗಳಲ್ಲಿ ವ್ಯಾಪಾರಮಾಡುವವರು
ಕೀರ್ತನೆಗಳು 107:22 -
ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು.
ಕೀರ್ತನೆಗಳು 113:3 -
ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
ಪ್ರಲಾಪಗಳು 3:41 -
ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.
ಯೋನ Jonah 2:9 -
ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ. 20 ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
ಎಫೆಸದವರಿಗೆ 5:19, 20 -
ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
1 ಥೆಸಲೊನೀಕದವರಿಗೆ 5:18 -
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
ಇಬ್ರಿಯರಿಗೆ 13:15 -
ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
ಪ್ರಕಟನೆ 19:5