ಶಾಂತಿ


 • ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
  ಆದಿಕಾಂಡ 15:15
 • ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
  ಕೀರ್ತನೆಗಳು 29:11
 • ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
  ಕೀರ್ತನೆಗಳು 34:14
 • ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
  ಕೀರ್ತನೆಗಳು 37:11
 • ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.
  ಕೀರ್ತನೆಗಳು 37:37
 • ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ.
  ಕೀರ್ತನೆಗಳು 119:165
 • ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
  ಕೀರ್ತನೆಗಳು 120:7
 • ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
  ಙ್ಞಾನೋಕ್ತಿಗಳು 16:7
 • ಪ್ರೀತಿಸುವದಕ್ಕೆ ಒಂದು ಸಮಯ, ದ್ವೇಷಿಸುವದಕ್ಕೆ ಒಂದು ಸಮಯ; ಯುದ್ಧದ ಸಮಯ, ಸಮಾಧಾನದ ಸಮಯ.
  ಪ್ರಸಂಗಿ 3:8
 • ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
  ಯೆಶಾಯ 9:6
 • ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
  ಯೆಶಾಯ 26:3
 • ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
  ಯೆಶಾಯ 32:17
 • ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
  ಯೆಶಾಯ 54:13
 • ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.
  ಯೆಶಾಯ 55:12
 • ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
  ಯೆಶಾಯ 57:21
 • ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
  ಯೆಶಾಯ 59:8
 • ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
  ಯೆರೆಮಿಯ 6:14
 • ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
  ಯೆರೆಮಿಯ 29:11
 • ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
  ಯೆರೆಮಿಯ 33:6
 • ನಾಶವು ಬರುತ್ತದೆ ಮತ್ತು ಅವರು ಸಮಾಧಾನವನ್ನು ಹುಡುಕುತ್ತಾರೆ; ಆದರೆ ಅದು ಇರುವದಿಲ್ಲ.
  ಯೆಹೆಜ್ಕೇಲನು 7:25
 • ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
  ಯೆಹೆಜ್ಕೇಲನು 13:16
 • ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
  ದಾನಿಯೇಲನು 8:25
 • ನೆಮ್ಮದಿಯಿಂದ ಸಂಸ್ಥಾನದ ಫಲವತ್ತಾದ ಪ್ರದೇಶ ಗಳಲ್ಲಿ ನುಗ್ಗಿ ತಂದೆ ತಾತಂದಿರು ಮಾಡದ ಕಾರ್ಯ ಗಳನ್ನು ಮಾಡುವನು; ಸೂರೆ, ಸುಲಿಗೆ, ಕೊಳ್ಳೆಹೊಡೆ ದವುಗಳನ್ನು ಅವರಲ್ಲಿ ಚೆಲ್ಲಿಬಿಡುವನು. ಹೌದು, ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತ ಕಾಲದ ತನಕ ಕಲ್ಪಿಸುತ್ತಿರುವನು.
  ದಾನಿಯೇಲನು 11:24
 • ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
  ನಹೂಮ 1:15
 • ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.
  ಮಲಾಕಿಯ 2:5
 • ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
  ಮತ್ತಾಯನು 5:9
 • ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
  ಮತ್ತಾಯನು 10:13
 • ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
  ಮತ್ತಾಯನು 10:34
 • ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
  ಮಾರ್ಕನು 4:39
 • ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
  ಮಾರ್ಕನು 5:34
 • ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
  ಮಾರ್ಕನು 9:50
 • ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.
  ಲೂಕನು 1:79
 • ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
  ಲೂಕನು 2:14
 • ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
  ಲೂಕನು 7:50
 • ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
  ಲೂಕನು 10:5
 • ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
  ಲೂಕನು 14:32
 • ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
  ಲೂಕನು 19:38
 • ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
  ಲೂಕನು 24:36
 • ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
  ಯೋಹಾನನು 14:27
 • ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
  ಯೋಹಾನನು 16:33
 • ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್‌ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
  ರೋಮಾಪುರದವರಿಗೆ 1:7
 • ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ. ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ; ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.
  ರೋಮಾಪುರದವರಿಗೆ 3:16-18
 • ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
  ರೋಮಾಪುರದವರಿಗೆ 5:1
 • ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
  ರೋಮಾಪುರದವರಿಗೆ 8:6
 • ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
  ರೋಮಾಪುರದವರಿಗೆ 10:15
 • ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
  ರೋಮಾಪುರದವರಿಗೆ 12:18
 • ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
  ರೋಮಾಪುರದವರಿಗೆ 14:17
 • ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
  ರೋಮಾಪುರದವರಿಗೆ 14:19
 • ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
  ರೋಮಾಪುರದವರಿಗೆ 15:13
 • ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್‌.
  ರೋಮಾಪುರದವರಿಗೆ 15:33
 • ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.
  1 ಕೊರಿಂಥದವರಿಗೆ 1:3
 • ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
  1 ಕೊರಿಂಥದವರಿಗೆ 7:15
 • ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
  1 ಕೊರಿಂಥದವರಿಗೆ 14:33
 • ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
  1 ಕೊರಿಂಥದವರಿಗೆ 13:11
 • ತಂದೆಯಾದ ದೇವ ರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
  ಗಲಾತ್ಯದವರಿಗೆ 1:3
 • ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
  ಗಲಾತ್ಯದವರಿಗೆ 6:16
 • ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
  ಗಲಾತ್ಯದವರಿಗೆ 5:22
 • ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು.
  ಎಫೆಸದವರಿಗೆ 2:14, 15
 • ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ.
  ಎಫೆಸದವರಿಗೆ 4:3
 • ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
  ಎಫೆಸದವರಿಗೆ 6:15
 • ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
  ಫಿಲಿಪ್ಪಿಯವರಿಗೆ 4:9
 • ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
  ಕೊಲೊಸ್ಸೆಯವರಿಗೆ 1:20
 • ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
  ಕೊಲೊಸ್ಸೆಯವರಿಗೆ 3:15
 • ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
  1 ಥೆಸಲೊನೀಕದವರಿಗೆ 5:4
 • ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
  2 ತಿಮೊಥೆಯನಿಗೆ 2:22
 • ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
  ಇಬ್ರಿಯರಿಗೆ 12:14
 • ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
  ಇಬ್ರಿಯರಿಗೆ 13:20
 • ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
  ಯಾಕೋಬನು 3:18
 • ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
  1 ಪೇತ್ರನು 3:11
 • ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ
  ಪ್ರಕಟನೆ 6:4