ಕಷ್ಟ ಪಟ್ಟು
- ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.
1 ಅರಸುಗಳು 17:16 -
ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.
ಯೋಬನು 5:20 -
ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು. ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
ಕೀರ್ತನೆಗಳು 9:9, 10 -
ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು. ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
ಕೀರ್ತನೆಗಳು 37:18, 19 -
ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
ಕೀರ್ತನೆಗಳು 37:25 -
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
ಕೀರ್ತನೆಗಳು 46:1-3 -
ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಕೀರ್ತನೆಗಳು 62:8 -
ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
ಕೀರ್ತನೆಗಳು 91:2 -
ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು. ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು. ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು.
ಕೀರ್ತನೆಗಳು 105:39-41 -
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಯೆಶಾಯ 44:3 -
ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ? ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
ಮತ್ತಾಯನು 6:30, 31 -
ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ. ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿ ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
ರೋಮಾಪುರದವರಿಗೆ 8:35-39 -
ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
2 ಕೊರಿಂಥದವರಿಗೆ 4:8, 9 -
ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
ಪ್ರಕಟನೆ 12:6 -
ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು; ಸಿಂಹಾ ಸನದ ಮುಖವನ್ನು ಹಿಂದೆಗೆಯುತ್ತಾನೆ; ಅದರ ಮೇಲೆ ತನ್ನ ಮೇಘವನ್ನು ವಿಸ್ತರಿಸುತ್ತಾನೆ. ಹಗಲು ರಾತ್ರಿ ಮುಗಿಯುವ ವರೆಗೆ ಆತನು ನೀರಿನ ಸುತ್ತಲೂ ಮೇರೆ ಯನ್ನು ಕಟ್ಟಿದ್ದಾನೆ.
ಯೋಬನು 26:8-10 -
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
ಕೀರ್ತನೆಗಳು 46:1-3 -
ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
ಕೀರ್ತನೆಗಳು 89:9 -
ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.
ಕೀರ್ತನೆಗಳು 93:4 -
ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.
ಕೀರ್ತನೆಗಳು 107: 29 -
ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
ಯೆಶಾಯ 4:6 -
ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ
ಯೆಶಾಯ 25:4 -
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಯೆಶಾಯ 43:2 -
ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
ನಹೂಮ 1:7 -
ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
ಮತ್ತಾಯನು 8:26, 27 -
ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
ಲೂಕನು 10:19