ದೇವರ ಜ್ಞಾನ
- ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.
ಕೀರ್ತನೆಗಳು 5:8 -
ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು. ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
ಕೀರ್ತನೆಗಳು 25:4, 5 -
ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
ಕೀರ್ತನೆಗಳು 25:9 -
ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.
ಕೀರ್ತನೆಗಳು 27:11 -
ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
ಕೀರ್ತನೆಗಳು 32:8 -
ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
ಕೀರ್ತನೆಗಳು 37:23 -
ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
ಕೀರ್ತನೆಗಳು 73:24 -
ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.
ಕೀರ್ತನೆಗಳು 119:18 -
ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
ಕೀರ್ತನೆಗಳು 119:105 -
ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
ಕೀರ್ತನೆಗಳು 119:130 -
ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
ಕೀರ್ತನೆಗಳು 143:8 -
ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ಙ್ಞಾನೋಕ್ತಿಗಳು 3:5, 6 -
ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
ಙ್ಞಾನೋಕ್ತಿಗಳು 6:22 -
ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
ಯೆಶಾಯ 30:21 -
ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
ಯೆಶಾಯ 42:16 -
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
ಯೆಶಾಯ 50:4 -
ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
ಯೆಶಾಯ 58:11 -
ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
ಯೆರೆಮಿಯ 10:23 -
ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
ಯೆರೆಮಿಯ 31:9 -
(ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ).
2 ಕೊರಿಂಥದವರಿಗೆ 5:7 -
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಇಬ್ರಿಯರಿಗೆ 4:12 -
ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.
2 ಪೂರ್ವಕಾಲವೃತ್ತಾ 19:6 -
ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ. ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
ಙ್ಞಾನೋಕ್ತಿಗಳು 2:3, 5, 6 -
ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು.
ಙ್ಞಾನೋಕ್ತಿಗಳು 16:1 -
ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
ಙ್ಞಾನೋಕ್ತಿಗಳು 28:5 -
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
ಯೆಶಾಯ 11:2, 3 -
ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.
ದಾನಿಯೇಲನು 1:17 -
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
ಯಾಕೋಬನು 1:5 -
ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
ಕೀರ್ತನೆಗಳು 143:8 -
ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ. ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.
ಕೀರ್ತನೆಗಳು 143:10, 11 -
ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
ಙ್ಞಾನೋಕ್ತಿಗಳು 1:5 -
ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ.
ಙ್ಞಾನೋಕ್ತಿಗಳು 12:15 -
ಜ್ಞಾನಹೀನನಿಗೆ ಮೂರ್ಖ ತನವು ಆನಂದವಾಗಿದೆ; ವಿವೇಕಿಯಾದರೋ ಯಥಾ ರ್ಥವಾಗಿ ನಡೆಯುತ್ತಾನೆ.
ಙ್ಞಾನೋಕ್ತಿಗಳು 15:22 -
ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
ಙ್ಞಾನೋಕ್ತಿಗಳು 19:20 -
ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
ಙ್ಞಾನೋಕ್ತಿಗಳು 20:18 -
ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
ಙ್ಞಾನೋಕ್ತಿಗಳು 24:6 -
ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
ಯೋಹಾನನು 7:24 -
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.
ಯಾಕೋಬನು 3:17 -
ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
2 ಕೊರಿಂಥದವರಿಗೆ 13:1