ಧೈರ್ಯ ಮತ್ತು ನಿರ್ಧಾರ


  • ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
    ಕೀರ್ತನೆಗಳು 119:46
  • ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
    ಙ್ಞಾನೋಕ್ತಿಗಳು 29:25
  • ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
    ಯೆಶಾಯ 40:9
  • ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
    ಯೆಶಾಯ 50:4
  • ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
    ಯೆರೆಮಿಯ 1:7
  • ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
    ಯೆಹೆಜ್ಕೇಲನು Ezekiel 3:9
  • ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು. ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.
    ಮತ್ತಾಯನು 5:14, 15
  • ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
    ಮತ್ತಾಯನು 5:16
  • ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
    ಮಾರ್ಕನು 8:38
  • ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
    ಅಪೊಸ್ತಲರ ಕೃತ್ಯಗ 1:8
  • ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
    ಅಪೊಸ್ತಲರ ಕೃತ್ಯಗ 4:13
  • ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
    ಅಪೊಸ್ತಲರ ಕೃತ್ಯಗ 5:29
  • ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
    ರೋಮಾಪುರದವರಿಗೆ 1:16
  • ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
    ಎಫೆಸದವರಿಗೆ 6:19, 20
  • ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
    1 ಥೆಸಲೊನೀಕದವರಿಗೆ 2:4
  • ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
    2 ತಿಮೊಥೆಯನಿಗೆ 1:8
  • ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
    ತೀತನಿಗೆ 2:15
  • ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
    1 ಪೇತ್ರನು 2:12