ಮದ್ಯವ್ಯಸನ
- ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
ಎಫೆಸದವರಿಗೆ 5:18 -
ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ. ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
ರೋಮಾಪುರದವರಿಗೆ 14:11, 12 -
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು 10 ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. -- ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
1 ಕೊರಿಂಥದವರಿಗೆ 6:9-11 -
ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ.
1 ಕೊರಿಂಥದವರಿಗೆ 6:12 -
ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ. ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ; ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ
ರೋಮಾಪುರದವರಿಗೆ 6:11-13 -
ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
ಯೋಹಾನನು 8:36 -
ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
ಙ್ಞಾನೋಕ್ತಿಗಳು 20:1 -
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ಙ್ಞಾನೋಕ್ತಿಗಳು 28:13 -
ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.
1 ಯೋಹಾನನು 1:8, 9 -
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
ಗಲಾತ್ಯದವರಿಗೆ 5:22, 23 -
ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
1 ಕೊರಿಂಥದವರಿಗೆ 10:13 -
ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;
1 ಕೊರಿಂಥದವರಿಗೆ 6:19 -
ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
1 ತಿಮೊಥೆಯನಿಗೆ 5:23 -
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು. ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ. ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು. ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು. ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
1 ಪೇತ್ರನು 4:2-7