ಹೆಮ್ಮೆ


 • ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.
  1 ಸಮುವೇಲನು 1 Samuel 2:3
 • ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
  ಙ್ಞಾನೋಕ್ತಿಗಳು 11:2
 • ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
  ಙ್ಞಾನೋಕ್ತಿಗಳು 13:10
 • ಕರ್ತನು ಗರ್ವಿಷ್ಟರ ಮನೆಯನ್ನು ಹಾಳುಮಾಡು ವನು; ವಿಧವೆಯರ ಮೇರೆಯನ್ನು ಆತನು ನೆಲೆಗೊಳಿಸು ವನು.
  ಙ್ಞಾನೋಕ್ತಿಗಳು 15:25
 • ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
  ಙ್ಞಾನೋಕ್ತಿಗಳು 22:4
 • ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
  ಙ್ಞಾನೋಕ್ತಿಗಳು 29:23
 • ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
  1 ಕೊರಿಂಥದವರಿಗೆ ं 1 Corinthians 10:12
 • ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
  ಯಾಕೋಬನು 4:10
 • ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
  ಲೂಕನು 14:11
 • ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
  ಗಲಾತ್ಯದವರಿಗೆ 5:22, 23
 • ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
  ಫಿಲಿಪ್ಪಿಯವರಿಗೆ 2:3-5
 • ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
  ಙ್ಞಾನೋಕ್ತಿಗಳು 16:5
 • ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
  ಙ್ಞಾನೋಕ್ತಿಗಳು 16:18
 • ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
  ಙ್ಞಾನೋಕ್ತಿಗಳು 16:25
 • ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
  ಙ್ಞಾನೋಕ್ತಿಗಳು 18:12
 • ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
  ಯಾಕೋಬನು 4:6
 • ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
  ಕೀರ್ತನೆಗಳು 25:9
 • ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ. ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು. ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.
  1 ಪೇತ್ರನು 5:5-7
 • ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
  1 ಅರಸುಗಳು 20:11
 • ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
  ಯೆಶಾಯ 66:2