ಕಾನೂನು ವಿಷಯಗಳು


 • ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು. ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು. ಪೇತ್ರನು ಆತನಿಗೆ-- ಅನ್ಯರಿಂದ ಎಂದು ಹೇಳಲಾಗಿ ಆತನು ಅವನಿಗೆ--ಹಾಗಾದರೆ ಮಕ್ಕಳು ಸ್ವತಂತ್ರರೇ. ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ ಮತ್ತಾಯನು 17:24-27
 • ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು. ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ? ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು. ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು. ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು. ಮತ್ತಾಯನು 22:17-21
 • ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು. ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ. 1 ಪೇತ್ರನು 2:12-14
 • ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ. ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ. ಮತ್ತಾಯನು 5:25-26
 • ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು. ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು. ಮತ್ತಾಯನು 10:18, 19
 • ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ. ರೋಮಾಪುರದವರಿಗೆ 13:8
 • ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು. ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು. ಯೋಹಾನನು 19:10, 11
 • ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು. ಕುರೇನ್ಯನು ಸಿರಿಯಾಕ್ಕೆ ಅಧಿಪತಿಯಾಗಿದ್ದಾಗ ಈ ಖಾನೇಷುಮಾರಿಯು ಮೊದಲನೆಯ ಸಾರಿ ನಡೆ ಯಿತು. ಆಗ ಎಲ್ಲರೂ ಖಾನೇಷುಮಾರಿ ಬರೆಯಿಸಿ ಕೊಳ್ಳುವದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಕ್ಕೆ ಹೋದರು. (ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್‌ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ ತನಗೆ ನಿಶ್ಚಯಮಾಡಲ್ಪಟ್ಟಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಖಾನೇಷುಮಾರಿ ಬರೆಸಿಕೊಳ್ಳುವದಕ್ಕಾಗಿ ಹೋದನು. ಲೂಕನು 2:1-5
 • ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ. ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ. ಯೆಶಾಯ 40:15, 17
 • ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ. 1 ಕೊರಿಂಥದವರಿಗೆ 16:9
 • ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು. ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು. ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು. ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ. ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ. ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ. ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ. ರೋಮಾಪುರದವರಿಗೆ 13:1-7