ವಿಕೃತ
- ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ. ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ. ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ. ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು; ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು. ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು; ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್. ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು. ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು. ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ರೋಮಾಪುರದವರಿಗೆ 1:18-28 -
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
ಎಫೆಸದವರಿಗೆ 4:22-24 -
ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.
ಯಾಜಕಕಾಂಡ 20:13 -
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು 10 ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
1 ಕೊರಿಂಥದವರಿಗೆ 6:9-11 -
ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
ಎಫೆಸದವರಿಗೆ 5:3 -
ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
ಇಬ್ರಿಯರಿಗೆ 13:4