ಮದುವೆ ಮತ್ತು ಲೈಂಗಿಕ


  • ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು. ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು. ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು. ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.
    ಆದಿಕಾಂಡ 2:21-24
  • ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಿದನು. ಆಗ ಆಕೆಯು ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು--ನಾನು ಕರ್ತ ನಿಂದ ಒಬ್ಬ ಮನುಷ್ಯನನ್ನು ಪಡೆದಿದ್ದೇನೆ ಅಂದಳು. ..ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.
    ಆದಿಕಾಂಡ 4:1, 25
  • ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು. ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?
    ಆದಿಕಾಂಡ 12:17-18
  • ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು. ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು. ಅಬ್ರಾಮನು ಕಾನಾನ್‌ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
    ಆದಿಕಾಂಡ 16:1-3
  • ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು. ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು. ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.
    ಆದಿಕಾಂಡ 18:10-12
  • ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು. ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
    ಆದಿಕಾಂಡ 38:9-10
  • ವ್ಯಭಿಚಾರ ಮಾಡಬಾರದು.
    ವಿಮೋಚನಕಾಂಡ 20:14
  • ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
    ವಿಮೋಚನಕಾಂಡ 20:17
  • ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ. ...ಇದಲ್ಲದೆ ಅವಳಿಂದ ನಿನ್ನನ್ನು ಹೊಲೆಮಾಡಿ ಕೊಳ್ಳದಂತೆ ನಿನ್ನ ನೆರೆಯವನ ಹೆಂಡತಿಯೊಂದಿಗೆ ನೀನು ಸಂಗಮಿಸಬೇಡ.
    ಯಾಜಕಕಾಂಡ 18:8, 20
  • ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. .. ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.
    ಯಾಜಕಕಾಂಡ 20:10, 13
  • ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು.
    ಯಾಜಕಕಾಂಡ 21:7
  • ಅವನು ತನಗೆ ಹೆಂಡತಿಯನ್ನು ಅವಳ ಕನ್ನಿಕಾವಸ್ಥೆಯಲ್ಲಿ ತೆಗೆದುಕೊಳ್ಳಬೇಕು. ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು.
    ಯಾಜಕಕಾಂಡ 21:13-14
  • ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ ಅಥವಾ ಪುರುಷನ ಮೇಲೆ ರೋಷದ ಆತ್ಮ ಬಂದು ಅವನು ತನ್ನ ಹೆಂಡತಿಯ ಮೇಲೆ ರೋಷಗೊಂಡಿದ್ದರೆ ಅವನು ತನ್ನ ಹೆಂಡತಿಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಲಿ; ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆ ಪ್ರಕಾರ ಮಾಡುವನು.
    ಅರಣ್ಯಕಾಂಡ 5:29-30
  • ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳ ಬಳಿಗೆ ಬಂದ ಮೇಲೆ ಅವಳನ್ನು ಹಗೆಮಾಡಿ ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟು ಅವಳ ಹೆಸರನ್ನು ಕೆಡಿಸಿ--ಈ ಹೆಂಗಸನ್ನು ನಾನು ತಕ್ಕೊಂಡು ಅವಳ ಬಳಿಗೆ ಬಂದಾಗ ಅವಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಹೇಳಿದರೆ ಆ ಹುಡುಗಿಯ ತಂದೆಯೂ ತಾಯಿಯೂ ಆ ಹುಡುಗಿಯ ಕನ್ಯಾ ಭಾವದ ಲಕ್ಷಣಗಳನ್ನು ತಕ್ಕೊಂಡು, ಪಟ್ಟಣದ ಹಿರಿಯರ ಮುಂದೆ ಬಾಗಲಿನ ಬಳಿಗೆ ತರಬೇಕು. ಆ ಮೇಲೆ ಹುಡುಗಿಯ ತಂದೆಯು ಹಿರಿಯರಿಗೆ ಹೇಳತಕ್ಕದ್ದೇ ನೆಂದರೆ--ನನ್ನ ಮಗಳನ್ನು ಈ ಮನುಷ್ಯನಿಗೆ ಹೆಂಡತಿ ಯಾಗಿ ಕೊಟ್ಟಿದ್ದೇನೆ; ಅವನು ಅವಳನ್ನು ಹಗೆಮಾಡಿ ದ್ದಾನೆ; ಇಗೋ, ಅವನು--ನಿನ್ನ ಮಗಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಅವಳಿಗೆ ವಿರೋಧವಾದ ಕೆಟ್ಟಮಾತಿಗೆ ಆಸ್ಪದಕೊಟ್ಟಿದ್ದಾನೆ; ಆದರೂ ಇದೆ ನನ್ನ ಮಗಳ ಕನ್ಯಾಭಾವದ ಲಕ್ಷಣಗಳು. ಹೀಗೆ ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು.
    ಧರ್ಮೋಪದೇಶಕಾಂಡ 22:13-17
  • ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.
    ಧರ್ಮೋಪದೇಶಕಾಂಡ 24:1
  • ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು.
    2 ಸಮುವೇಲನು 12:24
  • ಆದರೆ ಅಬೀಯನು ಬಲಗೊಂಡು ಹದಿನಾಲ್ಕು ಮಂದಿ ಹೆಂಡತಿಯರನ್ನು ಮದುವೆಮಾಡಿಕೊಂಡು ಇಪ್ಪತ್ತೆರಡು ಮಂದಿ ಕುಮಾರರನ್ನೂ ಹದಿನಾರು ಮಂದಿ ಕುಮಾರ್ತೆಯರನ್ನೂ ಪಡೆದನು.
    2 ಪೂರ್ವಕಾಲವೃತ್ತಾ 13:21
  • ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
    ಕೀರ್ತನೆಗಳು 128:3
  • ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು. ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
    ಙ್ಞಾನೋಕ್ತಿಗಳು 5:18-19
  • ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು.
    ಙ್ಞಾನೋಕ್ತಿಗಳು 6:29
  • ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
    ಙ್ಞಾನೋಕ್ತಿಗಳು 6:32
  • ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
    ಙ್ಞಾನೋಕ್ತಿಗಳು 18:22
  • ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
    ಙ್ಞಾನೋಕ್ತಿಗಳು 19:14
  • ವಿಶಾಲವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದಕ್ಕಿಂತ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದು ಲೇಸು.
    ಙ್ಞಾನೋಕ್ತಿಗಳು 21:9
  • ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.
    ಪ್ರಸಂಗಿ 9:9
  • ತನ್ನ ಬಾಯಿಯ ಮುದ್ದುಗಳಿಂದ ನನಗೆ ಮುದ್ದಿ ಡಲಿ; ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.
    ಪರಮ ಗೀತ 1:2
  • ಅವನ ಎಡಗೈ ನನ್ನ ತಲೆಯ ಕೆಳಗದೆ; ಅವನ ಬಲಗೈ ನನ್ನನ್ನು ಅಪ್ಪಿ ಕೊಳ್ಳುತ್ತದೆ.
    ಪರಮ ಗೀತ 2:6
  • ನಿನ್ನ ಎರಡು ಸ್ತನಗಳು ತಾವರೆ ಹೂವುಗಳಲ್ಲಿ ಮೇಯುವ ಅವಳಿ ಜವಳಿಯಾದ ಎರಡು ಜಿಂಕೆಯ ಮರಿಗಳ ಹಾಗೆ ಅವೆ. ..ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನನ್ನ ಸಹೋದರಿಯೇ, ವಧುವೇ, ನಿನ್ನ ಕಣ್ಣುಗಳ ಏಕದೃಷ್ಟಿಯಿಂದಲೂ ನಿನ್ನ ಕೊರಳಲ್ಲಿರುವ ಒಂದು ಕಂಠಮಾಲೆಯಿಂದಲೂ ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ!
    ಪರಮ ಗೀತ 4:5, 9, 10
  • ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
    ಯೆಶಾಯ 54:1
  • ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
    ಯೆರೆಮಿಯ 3:14
  • ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
    ಯೆಹೆಜ್ಕೇಲನು 16:36-37
  • ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
    ಹೋಶೇ 1:2
  • ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ; ಇಲ್ಲವೆ ನಾನು ಅವಳ ಗಂಡನಲ್ಲ; ಆದದರಿಂದ ಅವಳು ತನ್ನ ದೃಷ್ಟಿಯಿಂದ ತನ್ನ ವ್ಯಭಿಚಾರತ್ವಗಳನ್ನು ತನ್ನ ಸ್ತನಗಳ ಮಧ್ಯದಿಂದ ತನ್ನ ವ್ಯಭಿಚಾರಗಳನ್ನು ತೊಲಗಿಸಲಿ.
    ಹೋಶೇ 2:2
  • ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ; ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
    ಮತ್ತಾಯನು 5:31-32
  • ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ? ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
    ಮತ್ತಾಯನು 19:5-6
  • ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನು
    ಮತ್ತಾಯನು 19:29
  • ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ. ...ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ.
    ಮತ್ತಾಯನು 22:24, 30
  • ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು. ಯೇಸು ಪ್ರತ್ಯುತ್ತರವಾಗಿ ಅವರಿಗೆ--ಅವನು ನಿಮ್ಮ ಹೃದಯದ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು. ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು. ಈ ಕಾರಣದಿಂದ ಒಬ್ಬ ಮನುಷ್ಯನು ತನ್ನ ತಂದೆಯನ್ನೂ ತಾಯಿಯನ್ನೂ ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು.
    ಮಾರ್ಕನು 10:4-9
  • ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು.
    ಮಾರ್ಕನು 10:12
  • ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
    ಲೂಕನು 2:36
  • ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು;
    ಲೂಕನು 14:8
  • ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
    ಲೂಕನು 17:27
  • ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು. ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.
    ಯೋಹಾನನು 8:10-11
  • ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ. ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಮದುವೆ ಮಾಡಿಕೊಂಡರೆ ವ್ಯಭಿ ಚಾರಿಣಿ ಎಂದು ಕರೆಯಲ್ಪಡುವಳು; ಗಂಡನು ಸತ್ತರೆ ಆ ನ್ಯಾಯಪ್ರಮಾಣದಿಂದ ಆಕೆಯು ಬಿಡುಗಡೆಯಾಗಿ ದ್ದಾಳೆ. ಹೀಗೆ ಆಕೆ ಮತ್ತೊಬ್ಬನನ್ನು ಮದುವೆ ಮಾಡಿ ಕೊಂಡರೂ ವ್ಯಭಿಚಾರಿಣಿಯಲ್ಲ.
    ರೋಮಾಪುರದವರಿಗೆ 7:2, 3
  • ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ. ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ.
    1 ಕೊರಿಂಥದವರಿಗೆ 5:1, 2
  • ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
    1 ಕೊರಿಂಥದವರಿಗೆ 6:9-10
  • ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ. ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ತನ್ನ ಸ್ವಂತಬಲದಿಂದ ನಮ್ಮನ್ನೂ ಎಬ್ಬಿಸುವನು.
    1 ಕೊರಿಂಥದವರಿಗೆ 6:13, 14
  • ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ. ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ; ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
    1 ಕೊರಿಂಥದವರಿಗೆ 6:18-20
  • ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು. ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.
    1 ಕೊರಿಂಥದವರಿಗೆ 7:1, 2
  • ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ. ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು. ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
    1 ಕೊರಿಂಥದವರಿಗೆ 7:3-5
  • ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು; ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ. ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು. ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.
    1 ಕೊರಿಂಥದವರಿಗೆ 7:8-11
  • ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
    1 ಕೊರಿಂಥದವರಿಗೆ 7:14
  • ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ. ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು
    1 ಕೊರಿಂಥದವರಿಗೆ 7:32-34
  • ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.
    1 ಕೊರಿಂಥದವರಿಗೆ 7:39
  • ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
    ಗಲಾತ್ಯದವರಿಗೆ 5:19-21
  • ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
    ಎಫೆಸದವರಿಗೆ 5:3
  • ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ, ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು. ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ. ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ. ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ. ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ. ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು. ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ. ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
    ಎಫೆಸದವರಿಗೆ 5:22-33
  • ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
    ಕೊಲೊಸ್ಸೆಯವರಿಗೆ 3:5
  • ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ; ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ; ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
    1 ಥೆಸಲೊನೀಕದವರಿಗೆ 4:3-5
  • ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
    1 ತಿಮೊಥೆಯನಿಗೆ 1:10
  • ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು. .. ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
    1 ತಿಮೊಥೆಯನಿಗೆ 3:2, 12
  • ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
    ತೀತನಿಗೆ 1:6
  • ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
    ಇಬ್ರಿಯರಿಗೆ 13:4
  • ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.
    1 ಪೇತ್ರನು 3:7
  • ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
    ಪ್ರಕಟನೆ 2:20
  • ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
    ಪ್ರಕಟನೆ 9:21
  • ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
    ಪ್ರಕಟನೆ 19:2